Breaking News

ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

Spread the love

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದಂಪತಿ. ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ಏಕಾಏಕಿ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅಪಾಯಕಾರಿ ರೀತಿಯಲ್ಲಿ ಜೋತುಬೀಳುತ್ತಿದ್ದ ವಿದ್ಯುತ್ ತಂತಿಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಹೆಸ್ಕಾಂ ಬೇಜವಾಬ್ದಾರಿತನದಿಂದಾಗಿಯೇ ದಂಪತಿಗಳು ಬಲಿಯಾಗಿದ್ದಾರೆ ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರೋಶ ಮುಗಿಲುಮುಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಮೂಡಲಗಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ