Breaking News

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವು

Spread the love

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42), ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ