Breaking News

ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು

Spread the love

ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳಸಂದರ್ಶನಕ್ಕೆ ಕೋರ್ಟ್ ಅನುಮತಿ ಅಂದಿದ್ದು, ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟಿದೆ. ಜೈಲ್ ಮ್ಯಾನ್ಯುಯಲ್‌ನಲ್ಲಿ ಒಳಸಂದರ್ಶನಕ್ಕೆ ಅವಕಾಶ ಇದ್ರೆ ನೀಡುವಂತೆ ಆದೇಶ ನೀಡಿದ್ದು, ದರ್ಶನ್ ಕುಟುಂಬಸ್ಥರ ಜೊತೆ ಒಳಸಂದರ್ಶನ ನಡೆಸಬಹುದಾ ಎನ್ನುವ ಪ್ರಶ್ನೆ ಹುಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ಗೆ ಜೈಲಿನ ಒಳಸಂದರ್ಶನಕ್ಕೆ 57ನೇ ಸೆಷನ್ಸ್ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ನ್ಯಾಯಾಲಯವು ಜೈಲು ಸೂಪರಿಂಟೆಂಡೆಂಟ್‌ಗೆ ನೀಡಿದೆ.

ಜೈಲು ಮ್ಯಾನ್ಯುಯಲ್ ಪ್ರಕಾರ ಸಂದರ್ಶನಕ್ಕೆ ಅವಕಾಶವಿದ್ದರೆ ಸೂಪರಿಂಟೆಂಡೆಂಟ್ ಮನವಿಯನ್ನು ಪರಿಗಣಿಸಿ ಒಪ್ಪಿಗೆ ಸೂಚಿಸಿದರೆ ಮಾತ್ರ ಸಂದರ್ಶನಕ್ಕೆ ಅವಕಾಶವಿರುತ್ತದೆ. ಒಂದು ವೇಳೆ ಸೂಪರಿಂಟೆಂಡೆಂಟ್ ಒಪ್ಪಿಗೆ ನೀಡದಿದ್ದರೆ, ಸಂದರ್ಶನಕ್ಕೆ ಅವಕಾಶವಿರುವುದಿಲ್ಲ. ದರ್ಶನ್ ಅವರ ಜೈಲು ಸಂದರ್ಶನದ ಕುರಿತು ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ನೀಡಿದೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಿಂದ ಮೊಬೈಲ್ ವಶಪಡಿಸಿಕೊಳ್ಳುವಾಗ ಲೋಪವಾಗಿದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಶಪಡಿಸಿಕೊಂಡಿಲ್ಲ, ಬೇರೆ ಕಡೆ ವಶಕ್ಕೆ ಪಡೆದು ಸಾಕ್ಷ್ಯನಾಶ ಮಾಡಿದ್ದಾರೆ ಎಂಬ ಆರೋಪದೊಂದಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರಿಗೆ 5 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸಾಕ್ಷ್ಯಗಳ ಮಹತ್ವವನ್ನು ಎತ್ತಿಹಿಡಿದ ನ್ಯಾಯಾಲಯ, ಅರ್ಜಿಯಲ್ಲಿನ ಆರೋಪಗಳಿಗೆ ಬಲವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಪವನ್, ವಿನಯ್, ಧನರಾಜ್, ರಾಘವೇಂದ್ರ ಮತ್ತು ನಂದೀಶ್ ಎಂಬ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಕಾಮಾಕ್ಷಿಪಾಳ್ಯ ಪೊಲೀಸರು ಹೈಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏ.2ಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ