ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ.
ಅಧ್ಯಕ್ಷ ಡಿ ಕೆ ಶಿವ ಕುಮಾರ್ ಅವರಿಗೆ ಕೊರೊನ ಹಿನ್ನೆಲೆಯಲ್ಲಿ, ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ವೈದ್ಯರ ಮೂಲಕ ತಿಳಿದುಬಂದಿದೆ. ಮತ್ತು ಇದೆ ವಿಚಾರದಲ್ಲಿ ಡಿಕೆಶಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹಾಗಾಗಿ ಡಿಕೆಶಿ ಅವರು ಇಂದು ಬೆಳಗಾವಿ ಪ್ರವಾಸ ಕೈಗೊಂಡು ಹೊರಡಲು ಎಲ್ಲಾ ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ, ಆದ್ರೆ ತೀವ್ರ ಬೆನ್ನು ನೋವು ಕಾಣಿಸಿಕೊಂಡ ಕಾರಣ, ಕೈಗೊಂಡ ಬೆಳಗಾವಿ ಪ್ರವಾಸವನ್ನು ರದ್ದು ಗೊಳಿಸಿ,ಹತ್ತಿರದ ಕಾಯಿಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತು ಆಸ್ಪತ್ರೆಗೆ ದಾಖಲಿಸಿದ ಮೇಲೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಅವರಿಗೆ ಕೊರೊನ ಪಾಸಿಟಿವ್ ಬಂದಿದ್ದು, ಹೆಚ್ಚು ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾದ್ಯಮ ಮೂಲಕ ಈ ವಿಚಾರ ತಿಳಿದುಬಂದಿದೆ. ಹಾಗಾಗಿ ಕೊರೊನ ವೈರಸ್ ಬಿಸಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೂ ತಟ್ಟಿ ಎಲ್ಲರೂ ಅಚ್ಚರಿ ಪಡುವಂತೆ ಮಾಡಿದೆ…