Breaking News
Home / ಜಿಲ್ಲೆ / ಬೆಳಗಾವಿ / ಕೋವಿಡ್-೧೯: ಮತ್ತೇ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್-೧೯: ಮತ್ತೇ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಳಗಾವಿ, ಏ.೨೯(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ೨೫ ವರ್ಷದ ವ್ಯಕ್ತಿ(ಪಿ-೨೨೬)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಏ.೧೨ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೫ ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಪೈಕಿ ಏಳು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಎಂಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
***


Spread the love

About Laxminews 24x7

Check Also

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the loveಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ