Breaking News

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.

ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ 1, ಹಾವೇರಿಯಲ್ಲಿ 1, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ