Home / ಕೊರೊನಾವೈರಸ್ / ಇದ್ದಕ್ಕಿದ್ದಂತೆ ಜಾನುವಾರಗಳ ಸಾವು – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಇದ್ದಕ್ಕಿದ್ದಂತೆ ಜಾನುವಾರಗಳ ಸಾವು – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Spread the love

ಯಾದಗಿರಿ: ಸದ್ಯ ಕೊರೊನಾ ಗ್ರೀನ್ ಜೋನ್‍ನಲ್ಲಿರುವ ಯಾದಗಿರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕೆಳದ ಮೂರು ದಿನಗಳಿಂದ ದನ-ಕರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿವೆ.

ಜಿಲ್ಲೆಯ ಯಾದಗಿರಿ ತಾಲೂಕಿನ ನಗಲಾಪುರ ಗ್ರಾಮದಲ್ಲಿ ಕಳೆದ ಮೂರು ದಿನದಲ್ಲಿ ಆರು ದನಗಳು ಸಾವನ್ನಪ್ಪಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ದನಗಳ ಸಾವಿಗೆ ಯಾವುದೇ ಕಾರಣವಿಲ್ಲ ಮತ್ತು ಅವುಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಮೇಯಿಯಲು ಹೊರಗಡೆ ತಿರುಗಾಡಿ ಮನೆಗೆ ಬಂದು ನೀರು ಕುಡಿದ ತಕ್ಷಣವೇ ದನಗಳು ಸಾವನ್ನಪ್ಪುತ್ತಿವೆ.

ಹೀಗೆ ದನ-ಕರುಗಳು ಸಾವನ್ನಪ್ಪುತ್ತಿದ್ದಂತೆ ಪಶು ವೈದ್ಯರು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ. ಜಾನುವಾರುಗಳು ಹೀಗೆ ಸಾವನ್ನಪ್ಪಲು ಹಲವಾರು ಕಾರಣಗಳಿವೆ. ಆದರೆ ಈ ವರ್ಷದಲ್ಲಿ ಜಾನುವಾರುಗಳಿಗೆ ಸಂಭವಿಸಿದ ಯಾವುದೇ ಮಾರಣಾಂತಿಕ ಕಾಯಿಲೆಗಳು ಪತ್ತೆಯಾಗಿಲ್ಲ. ದನಗಳು ಹೀಗೆ ದಿಢೀರ್ ಸಾವನ್ನಪ್ಪುತ್ತಿರುವುದು ಗ್ರಾಮಸ್ಥರಲ್ಲಿ ಆಂತಕ ಸೃಷ್ಟಿಸಿದೆ.


Spread the love

About Laxminews 24x7

Check Also

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

Spread the love ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ