ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ.
ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ ಮಾಡಿದ್ದಾರೆ.
ಇದರಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ ಅಭಿಮಾನಿಗಳಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗುತ್ತಿದೆ.