Breaking News

2ನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲು ಮುಂದಾದ ಭಾರತ

Spread the love

ಭಾನುವಾರ ಢಾಕಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಸೋಲನುಭವಿಸಿದ ಬಳಿಕ ಸರಣಿಯಲ್ಲಿ 0-1 ರಲ್ಲಿ ಹಿನ್ನಡೆ ಸಾಧಿಸಿದೆ. ಸರಣಿಯಲ್ಲಿ ಸೋಲನ್ನು ತಪ್ಪಿಸಿಕೊಳ್ಳಲು ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ.

 

ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಹಲವು ಬದಲಾವಣೆ ಮಾಡಲು ಮುಂದಾಗಿದೆ.

 

ಉಮ್ರಾನ್ ಮಲಿಕ್ ಈಗ ಆಯ್ಕೆಗೆ ಲಭ್ಯವಾಗಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಶಾರ್ದುಲ್ ಠಾಕೂರ್ ಸ್ನಾಯುವಿನ ದೌರ್ಬಲ್ಯವನ್ನು ಹೊಂದಿದ್ದು ಎರಡನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಕುಲದೀಪ್ ಸೇನ್ ಚೊಚ್ಚಲ ಪಂದ್ಯ ಆಡಿದ ನಂತರ ಎರಡನೇ ಪಂದ್ಯದಲ್ಲಿ ಅವರು ಆಡುವ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ಇದೆ.

 

ಮೊಹಮ್ಮದ್ ಶಮಿ ಬದಲಿಗೆ ಉಮ್ರಾನ್ ಮಲಿಕ್ ತಂಡಕ್ಕೆ ಆಯ್ಕೆಯಾಗಿದ್ದು, ಕಣಕ್ಕಿಳಿಯುವುದು ಖಚಿತ, 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಅವರು, ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿಹಾಕಲು ತಂತ್ರ ರೂಪಿಸಲಿದ್ದಾರೆ.

 

ಮೊದಲನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್ ಗಳು ಉತ್ತಮವಾಗಿ ಪ್ರದರ್ಶನ ನೀಡಿದರು. ಆದರೆ, ಫೀಲ್ಡಿಂಗ್‌ನಲ್ಲಿ ಮಾಡಿದ ಎಡವಟ್ಟುಗಳಿಂದ ಬಾಂಗ್ಲಾದೇಶ 1 ವಿಕೆಟ್‌ನ ರೋಚಕ ಜಯ ಸಾಧಿಸಲು ಕಾರಣವಾಯಿತು. ತಂಡಕ್ಕೆ ಉಮ್ರಾನ್ ಮಲಿಕ್ ಸೇರ್ಪಡೆ, ಮಧ್ಯಮ ಓವರ್ ಗಳಲ್ಲಿ ಭಾರತದ ಬೌಲಿಂಗ್ ಮತ್ತಷ್ಟು ಬಲಿಷ್ಠವಾಗಿದೆ.

 

ಕುಲದೀಪ್ ಸೇನ್ ತಾವು ಆಡಿದ ಚೊಚ್ಚಲ ಪಂದ್ಯದಲ್ಲಿ ಸಾಧಾರಣ ಬೌಲಿಂಗ್ ಮಾಡಿದರು. ಓವರ್‌ಗೆ 6 ರನ್‌ಗಳಿಗಿಂತ ಹೆಚ್ಚು ರನ್ ಸೋರಿಕೆ ಮಾಡಿದರೂ ಕೂಡ ಪ್ರಮುಖ ಎರಡು ವಿಕೆಟ್ ಪಡೆದರು. ಎರಡನೇ ಏಕದಿನ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಢಾಕಾ ಪಿಚ್‌ ಅವರ ಬೌಲಿಂಗ್ ಶೈಲಿಗೆ ಸಹಕಾರಿಯಾಗಿದೆ.

 

ಶಾರ್ದೂಲ್ ಠಾಕೂರ್ ಮೊದಲನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅವರು ಗಾಯದಿಂದ ಬಳಲುತ್ತಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಅವರು ವಿಶ್ರಾಂತಿ ಪಡೆಯಲಿದ್ದು, ಉಮ್ರಾನ್ ಮಲಿಕ ಆಡಲಿದ್ದಾರೆ.

 

ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಕುಲದೀಪ್ ಸೇನ್ ಎರಡನೇ ಏಕದಿನ ಪಂದ್ಯದಲ್ಲಿ ಆಡುವ ವೇಗಿಗಳಾಗಿದ್ದಾರೆ.

 

ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್


Spread the love

About Laxminews 24x7

Check Also

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Spread the love ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್‌ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ