Breaking News

ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

Spread the love

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಮಾಡಿರುವ ಘಟನೆ ಮೈಸೂರಿನ  ಸರಸ್ವತಿಪುರಂನಲ್ಲಿ ನಡೆದಿದೆ.

ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿ ಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ವಾಸವಿದ್ದರು.
ಸಂಧ್ಯಾ ಅವರನ್ನ ಟಿ.ಕೆ ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್‌ಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತು.

ಸದ್ಯ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಮಗಳ ಶವ ಪತ್ತೆಯಾಗಿರುವುದು ಪೋಷಕರಲ್ಲಿ ಆಘಾತ ತರಿಸಿದೆ. ಪೋಷಕರು ಪತಿ ಕುಟುಂಬದ ವಿರುದ್ಧವೇ ಕೊಲೆ ಆರೋಪ ಮಾಡಿದ್ದು, ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್‌

Spread the loveಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ  ನಡೆದಿದೆ. ಹಾಸನ ನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ