Breaking News

ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ

Spread the love

ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ.

ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು ಮೇಲೆ ಎತ್ತಲು ಹೋಗಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ.

ಇನ್ನು,ಈಜುಬಾರದ ಕಾರಣ ರಾಜಮ್ಮ ತನ್ನ ಪ್ರಾಣ ಕಳೆದುಕೊಂಡಿದ್ದಾಳೆ. ಬಾಲಕನನ್ನು ಬದುಕಿಸಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ್ದಾಳೆ. ವಡಗೇರಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸಚಿವ ಸಂಪುಟ ಶಿಫಾರಸು

Spread the loveಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ