Breaking News

ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ- ದೃಶ್ಯ ಮೊಬೈಲ್‌ನಲ್ಲಿ ಸೆರೆ

Spread the love

ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಶಾಲೆವೊಂದರಲ್ಲಿ ನಡೆದಿದೆ.

ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ದೃಶ್ಯ ಅದೇ ಶಾಲೆಯ ವಿದ್ಯಾರ್ಥಿಗಳ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡ್ತಿದ್ದು, ವಿಡಿಯೋ ಬಗ್ಗೆ ತಿಳಿಯುತ್ತಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯ ಪೋಷಕರು ಹೆಚ್​​.ಡಿ ಕೋಟೆ ಬಿಇಓ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಇಓ ಅವರು, ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ಆದರೆ ಇದುವರೆಗೂ ಯಾವುದೇ ಅಧಿಕಾರಿ ಶಾಲೆಗೆ ಭೇಟಿ ನೀಡಿಲ್ಲ ಎನ್ನಲಾಗಿದ್ದು, ಕೇವಲ ದೂರವಾಣಿ ಮೂಲಕ ಘಟನೆ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ್ದರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ಮುಖ್ಯ ಶಿಕ್ಷಕ ಕೂಡ ಶಾಲೆಗೆ ಹಾಜರಾಗಲು ಹಿಂಜರಿದಿದ್ದು, ಶಾಲೆಗೆ ಬಂದರೇ ಗ್ರಾಮಸ್ಥರ ಆಕ್ರೋಶಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂಬ ಆತಂಕ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಗ್ರಾಮಸ್ಥರು ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳಬೇಕು ಇನ್ನು ಮುಂದೇ ಇಂತಹ ಘಟನೆಗಳು ನಡೆಯದಂತೆ ಕಾನೂನು ರೂಪಿಸಿಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ