Breaking News

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

Spread the love

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ.

ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು.

ಬೆಳಗ್ಗೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂಜೆ ವೇಳೆಗೆ ಶವ ಪತ್ತೆಯಾಗಿದ್ದು, ಮೃತದೇಹ ಹೊರತೆಗೆಯಲಾಗಿದೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇತ್ತ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ