Breaking News
Home / new delhi / ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

Spread the love

ಚಿಕ್ಕಮಗಳೂರು.    ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ

(ಚಿಕ್ಕಮಗಳೂರು ಜಿಲ್ಲಾಗಡಿ) 99.200ಕಿಮೀ (ಕೊಟ್ಟಿಗೆಹಾರ) ವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸೆ.1ರಿಂದ ಮುಂದಿನ ಆದೇಶದವರೆಗೂ ದಿನದ 24 ಗಂಟೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ