ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ.
ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. ದೇಶ ಕಾಯುವ ಯೋಧನ ಕೈಗೆ ಕೋಳ ಹಾಕಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೈಗೆ ಕೋಳ ಹಾಕಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮಂಗಳವಾರ ಯೋಧ ಸಚಿನ್ ಸಾವಂತ್ ಅವರಿಗೆ ಜಾಮೀನು ದೊರಕ್ಕಿದ್ದು, ಜೈಲಿನಿಂದ ಹೊರ ಬಂದಿದ್ದರು. ಖುದ್ದು ಸಿಆರ್ ಪಿಎಫ್ ಅಧಿಕಾರಿಗಳೇ ಸಚಿವ ಅವರನ್ನು ಕರೆತರಲು ಹೋಗಿದ್ದರು.