Breaking News

ದೇಶದಲ್ಲಿ ಇಂದು 68 ಸಿಆರ್‌ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢ………

Spread the love

ನವದೆಹಲಿ: ದೇಶದಲ್ಲಿ ಇಂದು 68 ಸಿಆರ್‌ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಈವರೆಗೆ 127 ಸಿಆರ್‌ಪಿಎಫ್ ಯೋಧರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಲಾಕ್‍ಡೌನ್ ಹಿನ್ನೆಲೆ ಸಿಆರ್‌ಪಿಎಫ್ ಯೋಧರನ್ನು ರಾಜಧಾನಿ ದೆಹಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಕೊರೊನಾ ಪತ್ತೆಯಾದ ಎಲ್ಲ 68 ಸೈನಿಕರು ಪೂರ್ವ ದೆಹಲಿಯಲ್ಲಿರುವ ಬೆಟಾಲಿಯನ್‍ಗೆ ಸೇರಿದವರಾಗಿದ್ದಾರೆ. ಈ ಬೆಟಾಲಿಯನ್‍ನ ಸೈನಿಕರಲ್ಲಿ ಒಬ್ಬರಿಗೆ ಮೊದಲೇ ಸೋಂಕು ತಗುಲಿರುವುದು ದೃಢಪಟ್ಟಿತ್ತು

ಈವರೆಗೂ ಪೂರ್ವ ದೆಹಲಿಯಲ್ಲಿರುವ ಬೆಟಾಲಿಯನ್‍ನ ಒಟ್ಟು 122 ಯೋಧರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ದೇಶದಲ್ಲಿ ಒಟ್ಟು 127 ಸಿಆರ್‌ಪಿಎಫ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಓರ್ವ ಗುಣಮುಖರಾದರೆ, ಮತ್ತೊಬ್ಬರು ಮೃತಪಟ್ಟಿದ್ದಾರೆ.

ಸಿಆರ್‌ಪಿಎಫ್‍ನ 55 ವರ್ಷದ ಸಬ್ ಇನ್ಸ್‌ಪೆಕ್ಟರ್ ಒಬ್ಬರಿಗೆ ಸೋಂಕು ತಗುಲಿರುವುದು ಕಳೆದ ವಾರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮಂಗಳವಾರ ಮೃತಪಟ್ಟಿದ್ದರು. ಅವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದರು.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ