Breaking News

ಹಿಂದೂಗಳ ಮೇಲಿನ ದಾಳಿ ಕೇಸ್ ವಾಪಸ್ – ಸರ್ಕಾರ ಯಾವ ಸಂದೇಶ ಕೊಡ್ತಿದೆ: ಸಿ.ಟಿ ರವಿ ಪ್ರಶ್ನೆ

Spread the love

ಚಿಕ್ಕಮಗಳೂರು: ಹಿಂದೂಗಳ ಮೇಲಿನ ದಾಳಿ ಕೇಸ್ ವಾಪಸ್ ಪಡೆದು ರಾಜ್ಯ ಸರ್ಕಾರ ಯಾವ ಸಂದೇಶ ಕೊಡುತ್ತಿದೆ ಎಂದು ಎಂಎಲ್‌ಸಿ ಸಿ.ಟಿ ರವಿ  ಪ್ರಶ್ನಿಸಿದರು.

ಚಿಕ್ಕಮಗಳೂರಿನಲ್ಲಿ  ಅವರು ಮಾಧ್ಯಮಗಳ ಜೊತೆ ಮಾತಾಡಿದರು. ಈ ವೇಳೆ. ಲಾಡ್ಲೆ ಮಶಾಕ್ ದರ್ಗಾ  ಕೇಸ್ ವಾಪಸ್ ವಿಚಾರವವಾಗಿ ಮಾತಾಡಿ, ರಾಘವ ಚೈತನ್ಯ ಬೃಂದಾವನದ ಪೂಜೆಗೆ ಹೋದಾಗ ದಾಳಿ ಮಾಡಿದ್ದರು. ಬಂದೋಬಸ್ತ್‌ಗೆ ಇದ್ದ ಪೊಲೀಸರು, ಎಸ್ಪಿ, ಸಂಸದ ಖೂಬಾ ಅವರ ಕಾರಿನ ಮೇಲೆ ದಾಳಿ ಮಾಡಿದವರ ಕೇಸ್ ವಾಪಸ್ ಪಡೆಯಲಾಗಿದೆ. ಈ ಮೂಲಕ ಸರ್ಕಾರ ಏನು ಸಂದೇಶ ಕೊಡ್ತಿದೆ? ಈ ಮೂಲಕ ನಿಮ್ಮ ಜೊತೆ ನಾವಿದ್ದೇವೆ ಎಂಬ ನೀತಿಯನ್ನ ಕಾಂಗ್ರೆಸ್ ಅನುಸರಿಸುತ್ತಿದೆ.

ಕಮ್ಯುನಲ್-ಕ್ರಿಮಿನಲ್ ಗಳಿಗೆ ರಕ್ಷಣೆ ಕೊಡುವ ಕಾಂಗ್ರೆಸ್ ನೀತಿ ಸಮಾಜಘಾತುಕ, ಅಪಾಯಕಾರಿಯಾಗಿದೆ. ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆದಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಚಳುವಳಿ ಕೇಸ್ ವಾಪಸ್ ಪಡೆಯೋದು ಬೇರೆ, ಬೆಂಕಿ ಹಾಕಿ, ದೊಣ್ಣೆ ಹಿಡಿದ ಕೇಸ್ ವಾಪಸ್ ಪಡೆಯೋದು ಬೇರೆ. ಸರ್ಕಾರ ತಕ್ಷಣ ಈ ನಿರ್ಣಯ ಹಿಂಪಡೆಯಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ