Home / ಜಿಲ್ಲೆ / ಚಿತ್ರದುರ್ಗ / ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..

ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..

Spread the love

ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಗುಜರಾತ್‍ನ ಅಹಮದಾಬಾದ್‍ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್‍ಓ ಡಾ.ಪಾಲಾಕ್ಷ, ಗುಜರಾತ್‍ನಿಂದ ಬಂದಿದ್ದ ಮೂವರು ತಬ್ಲಿಘಿಗಳಿಗೆ ಸೋಂಕು ಪತ್ತೆಯಾಗಿದೆ. ಉಳಿದಂತೆ 12 ಜನರ ರಿಪೋರ್ಟ್ ನೆಗೆಟಿವ್ ಬಂದಿದೆ. ಈಗಾಗಲೇ ಸೋಂಕಿತರನ್ನು ಪ್ರತ್ಯೇಕವಾಗಿರಸಲಾಗಿದೆ. ಜೊತೆಗೆ ಎಸ್‍ಜೆಎಂ ಸರ್ಕಲ್‍ನಲ್ಲಿರುವ ಸರ್ಕಾರಿ ಹಾಸ್ಟಲ್ ಪ್ರದೇಶವನ್ನು ಸೀಲ್‍ಡೌನ್ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಇಂದು ಮೂವರಿಗೆ ಕೊರೊನಾ ದೃಢಪಟ್ಟಿದೆ. ಮುಂದಿನ ದಿನಗಳಲ್ಲಿ ಎಷ್ಟು ಜನರಿಗೆ ತಗಲುತ್ತದೆ ಎನ್ನುವ ಆತಂಕ ಹೆಚ್ಚಾಗಿದೆ. ಕಟ್ಟುನಿಟ್ಟಿನ ನಿಯಮ ಪಾಲನೆ ಮೂಲಕ ಜಿಲ್ಲೆ ಗ್ರೀನ್ ಝೋನ್‍ನಲ್ಲಿತ್ತು. ಆದರೆ ಈಗ ಅಹಮದಾಬಾದ್‍ನಿಂದ ಬಂದ ತಬ್ಲಿಘಿಗಳಿಂದ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೊರೊನಾ ಹರಡದಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಹಿಂದೆ ಏನಾಗಿತ್ತು?:
ಅಹಮದಾಬಾದ್‍ನಿಂದ ಮೇ 5ರಂದು ಚಿತ್ರದುರ್ಗದ 15 ಜನ ಹಾಗೂ ತುಮಕೂರಿನ 18 ಜನ ತಬ್ಲಿಗಿಗಳು ಒಂದೇ ಬಸ್‍ನಲ್ಲಿ ವಾಪಸ್ ಆಗಿದ್ದು. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಮಾರ್ಚ್ 8ರಂದು ನಡೆದ ತಬ್ಲಿಘಿ ಸಭೆಗೆ ತೆರಳಿದ್ದರು. ಲಾಕ್‍ಡೌನ್ ಸಡಿಲಿಕೆಯಿಂದಾಗಿ ಮೇ 4ರಂದು ಗುಜರಾತಿನಿಂದ ಪ್ರಯಾಣ ಬೆಳೆಸಿ ಮೇ 5ರಂದು ಅವರ ಸ್ವಗ್ರಾಮಗಳಿಗೆ ತೆರಳಲು ಚಿತ್ರದುರ್ಗಕ್ಕೆ ಆಗಮಿಸಿದ್ದರು. ಇದರಿಂದ ಎಚ್ಚೆತ್ತ ಜಿಲ್ಲೆಯ ಪೊಲೀಸರು ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಚೆಕ್ ಪೋಸ್ಟ್ ಬಳಿ ಅವರನ್ನು ತಡೆದು ಪರಿಶೀಲನೆ ನಡೆಸಿದ್ದರು. ಬಳಿಕ ಅವರನ್ನು ಎಸ್‍ಜೆಎಂ ಸರ್ಕಲ್‍ನಲ್ಲಿರುವ ಸರ್ಕಾರಿ ಹಾಸ್ಟಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.


Spread the love

About Laxminews 24x7

Check Also

ಮುರುಘಾ ಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಸ್ಪೋಟಕ ಸಂಗತಿಗಳು ಬಹಿರಂಗ

Spread the love ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಅನಿಲ್‌ ನೇತೃತ್ವದಲ್ಲಿ ಪ್ರಕರಣದ ತನಿಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ