ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು, ಅಂಬುಲೆನ್ಸ್ ಮುಖಾಂತರ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸಿದ್ದಾರೆ.