ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ.
ದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಇಂದು ಸುಮಾರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಭಾಗವಹಿಸಿದ್ದರು. ತಮಿಳುನಾಡಿನ ಪರವಾಗಿ ನೀರಾವರಿ ಕಾರ್ಯದರ್ಶಿ ಪ್ರಶಾಂತ್ ಮತ್ತು ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಪಾಲ್ಗೊಂಡಿದ್ದರು.
ನಿನ್ನೆ ಸಿಡಬ್ಲ್ಯೂಆರ್ಸಿ ನೀಡಿದ್ದ ದಿನಂಪ್ರತಿ 9,000 ಕ್ಯೂಸೆಕ್ ನೀರು ಹರಿಸುವಂತೆ ಮಾಡಿದ್ದ ಶಿಫಾರಸನ್ನು ಸಿಡಬ್ಲ್ಯೂಎಂಎ ಎತ್ತಿಹಿಡಿದಿದ್ದು, ಅದನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.
Laxmi News 24×7