Breaking News

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Spread the love

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು  ಹೊರವಲಯದ ಬೊಮ್ಮಸಂದ್ರದಲ್ಲಿ  ನಡೆದಿದೆ.

ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಎದ್ದು ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ