Breaking News

ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

Spread the love

ಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಎಂಬ ‘ಉಡುಗೊರೆ’ ನೀಡಿದೆ. ಕೇಂದ್ರದ ಈ ಕ್ರಮ ಅತ್ಯಂತ ದುಃಖಕರ ಹಾಗೂ ಖಂಡನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕಿಡಿ ಕಾರಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ₹60 ಹೆಚ್ಚಳ ಮಾಡಲಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹115 ಏರಿಕೆ ಮಾಡಲಾಗಿದೆ. ಕಳೆದ 11 ತಿಂಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ ಒಟ್ಟು ₹110 ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಹೊರೆ ಹಾಕಿದಂತಾಗಿದೆ’ ಎಂದು ತಿಳಿಸಿದ್ದಾರೆ.

‘ಅಡುಗೆ ಅನಿಲವು ಪ್ರತಿಯೊಂದು ಮನೆಯ ಅಗತ್ಯ ವಸ್ತುವಾಗಿದೆ. ಮನೆಗಳನ್ನು ನಡೆಸುವ ಮಹಿಳೆಯರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಈ ಅಗತ್ಯ ವಸ್ತುವಿನ ಬೆಲೆ ಹೆಚ್ಚಿಸುವುದು ಮಹಿಳೆಯರ ಮೇಲೆ ಮತ್ತಷ್ಟು ಆರ್ಥಿಕ ಒತ್ತಡ ತರುವ ಕ್ರಮವಾಗಿದೆ. ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುವ ಕೇಂದ್ರ ಸರ್ಕಾರ ಮಹಿಳೆಯರ ದಿನದಂದೇ ಇಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ವಿಷಾದಕರ’ ಎಂದು ಹೆಬ್ಬಾಳಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯ ಸರ್ಕಾರದ ವಿರುದ್ಧ ಸದಾ ಆರೋಪ ಮತ್ತು ಪ್ರತಿಭಟನೆ ಮಾಡುವ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ? ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯನ್ನು ಅವರು ಸಮರ್ಥಿಸಿಕೊಳ್ಳುತ್ತಾರೆಯೇ? ಅಥವಾ ಬಡವರ ಮತ್ತು ಮಹಿಳೆಯರ ಪರವಾಗಿ ಧ್ವನಿ ಎತ್ತುತ್ತಾರೆಯೇ?’ ಎಂದು ಪ್ರಶ್ನಿಸಿದ್ದಾರೆ.

‘ಕೇಂದ್ರ ಸರ್ಕಾರವು ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಉಂಟಾಗಿರುವ ಆರ್ಥಿಕ ಭಾರವನ್ನು ಕಡಿಮೆ ಮಾಡಬೇಕು’ ಎಂದು ಸಚಿವರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ