Breaking News

ಸಾವಿರಕ್ಕಿಂತ ಹೆಚ್ಚು ಸಿಲಿಂಡರ್‌ ನೀಡಲಾಗದು’: ಸಚಿವ ಕೆ.ಎಚ್‌.ಮುನಿಯಪ್ಪ

Spread the love

ಬೆಂಗಳೂರು: ಈಗಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ನಿತ್ಯ ಒಂದು ಸಾವಿರಕ್ಕಿಂತ ಹೆಚ್ಚು ಸಿಲಿಂಡರ್‌ಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಐವನ್‌ ಡಿಸೋಜ ಅವರು ಬುಧವಾರ ಈ ಬಗ್ಗೆ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುನಿಯಪ್ಪ, ‘ಪ್ರತಿದಿನ ವಾಣಿಜ್ಯ ಬಳಕೆಯ 44 ಸಾವಿರ ಸಿಲಿಂಡರ್‌ಗಳಿಗೆ ಬೇಡಿಕೆ ಇದೆ.

ಆದರೆ, 9 ಸಾವಿರ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌, ಆಸ್ಪತ್ರೆ ಇತ್ಯಾದಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ರೈಲು ನಿಲ್ದಾಣ, ಬಸ್‌ ನಿಲ್ದಾಣ, ಇಂದಿರಾ ಕ್ಯಾಂಟಿನ್‌ಗೆ ಎರಡನೇ ಆದ್ಯತೆ ನೀಡುತ್ತೇವೆ’ ಎಂದರು.

ಹೋಟೆಲ್‌ ಅಸೋಸಿಯೇಷನ್‌ಗಳ ಸಭೆಯನ್ನು ಇದೇ 23ರಂದು ಕರೆದು, ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಒಂದು ವಾರದಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ಬೆಂಗಳೂರಿನ ಶಾಸಕರ ಭವನದಲ್ಲಿ ಇರುವ ಕ್ಯಾಂಟಿನ್‌ಗೆ ಒಟ್ಟು ಬೇಡಿಕೆಯ ಶೇ 50ರಷ್ಟು ಸಿಲಿಂಡರ್‌ಗಳನ್ನು ವಿಧಾನ ಮಂಡಲದ ಅಧಿವೇಶನ ಮುಗಿಯುವವರೆಗೂ ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ