ಹೊಸದಿಲ್ಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.
ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ ವಹಿಸಲು ಸಮ್ಮತಿ ನೀಡಿತ್ತು. ಇಸ್ರೋ ನಿರ್ಮಿಸಲಿರುವ ಉಪಗ್ರಹಗಳು, ರಾಕೆಟ್‍ಗಳ ನಿರ್ಮಾಣ ಮತ್ತು ಇವುಗಳ ಉಡಾವಣಾ ಕಾರ್ಯಾಚರಣೆ ಸೇರಿದಂತೆ ಇಸ್ರೋದ ಎಲ್ಲ ಚಟುವಟಿಕೆಗಳಲ್ಲೂ ಖಾಸಗಿ ಸಂಸ್ಥೆಗಳು ಭಾಗವಹಿಸಬಹುದು.
ಈ ಹಿಂದೆ ಕೆಲವು ಖಾಸಗಿ ಸಂಸ್ಥೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಇಸ್ರೋದ ಎಲ್ಲ ಚಟುವಟಿಕೆಗಳು ಮತ್ತು ಕಾರ್ಯಗಳಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಮುಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.