ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು ಪಡಿಸಲಾಗಿದೆ.
ಕೊನೆಯ ಮೂರು ಆಂತರಿಕ ಪರೀಕ್ಷೆ ಅಂಕಗಳ ಮೇಲೆ ಫಲಿತಾಂಶ ನೀಡಲು ಬೋರ್ಡ್ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಮಹಾರಾಷ್ಟ್ರ, ತಮಿಳುನಾಡು ಮತ್ತು ದೆಹಲಿಯಲ್ಲಿ ಪರೀಕ್ಷೆಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ದೇಶದಾದ್ಯಂತ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಸಿಬಿಎಸ್ಇ ಬೋರ್ಡ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.