Breaking News

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

Spread the love

ನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ ನಾಗ್‌  ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.

ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಸೆಪ್ಟೆಂಬರ್ 22 ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಗುಜರಾತ್‌ನ ಕೆವಾಡಿಯಾದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ದಿಗ್ಗಜ ಅನಂತ ನಾಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ. ‘ದಶಕಗಳ ಕಾಲ ತಮ್ಮ ಸಹಜ ಅಭಿನಯ, ಅದ್ಭುತ ಬಹುಮುಖಿ ಪ್ರತಿಭೆ ಮತ್ತು ಮೇಧಾವಿತನದ ಮೂಲಕ ಅವರು ಭಾರತೀಯ ಚಲನಚಿತ್ರರಂಗದ ಮೇಲೆ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ಅಪರೂಪದ ಆಳ ಹಾಗೂ ನೈಜತೆಯನ್ನು ತಂದುಕೊಟ್ಟಿದ್ದಾರೆ. ನಿಜಕ್ಕೂ ಅತ್ಯುನ್ನತ ಕಲಾವಿದರೊಬ್ಬರಿಗೆ ಸಂದಿರುವ ಅತ್ಯಂತ ಸೂಕ್ತವಾದ ಗೌರವವಿದು’ ಎಂದು ಮೋದಿ ಎಕ್ಸ್‌ ಖಾತೆಯಲ್ಲಿ ಬಣ್ಣಿಸಿದ್ದಾರೆ.

1948ರ ಸೆ. 4ರಂದು ಅನಂತ್ ನಾಗ್ ಅವರು ಉತ್ತರ ಕನ್ನಡದ ಶಿರಳ್ಳಿ ಎಂಬಲ್ಲಿ ಜನಿಸಿದರು. 1973ರ ‘ಸಂಕಲ್ಪ’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ ಅನಂತ್ ನಾಗ್, ಆನಂತರದಲ್ಲಿ ಶ್ಯಾಮ್ ಬೆನಗಲ್ ಅವರ ಅಂಕುರ್, ಬಯಲುದಾರಿ, ನಾ ನಿನ್ನ ಬಿಡಲಾರೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದರು. ತಮ್ಮ ಆರಂಭಿಕ ಚಿತ್ರ ಜೀವನದಲ್ಲಿ ದೊಡ್ಡ ಯಶಸ್ಸು ಗಳಿಸಿದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನಂತ್‌ ನಾಗ್‌, ಯಾವುದೇ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅಭಿನಯಿಸಬಲ್ಲ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ