Breaking News

ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ – ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು

Spread the love

ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಡಿಎಆರ್ ಸಿಪಿಐ ವಾಹನ ಚಾಲಕರಾಗಿದ್ದರು. ಹೃದಯಾಘಾತದಿಂದ ಕರ್ತವ್ಯನಿರತ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ‌

 


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ