Breaking News

ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು – ಹೃದಯಾಘಾತ ಶಂಕೆ

Spread the love

ದಾವಣಗೆರೆ: ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಎಸ್‌ಪಿಎಸ್ ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ದಾವಣಗೆರೆಯ ಮೆಹೆಬೂಬ್ ನಗರದ ನಿವಾಸಿ ಮುನ್ನಾ ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಕುಸಿದು ಬಿದ್ದು ಮುನ್ನಾ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮುನ್ನಾ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಾರಿ ಓಡಿಸಿದ ಪೇಮೆಂಟ್ ಪಡೆದು ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಏಕಾಏಕಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಸಿದ ವ್ಯಕ್ತಿಯ ಪ್ರಾಣ ಉಳಿಸಲು ಸ್ಥಳೀಯರು ಹರಸಾಹಸಪಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಮೊದಲು ಹೃದಯಾಘಾತಕ್ಕೆ ತುತ್ತಾಗಿದ್ದ ಮುನ್ನಾಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಎರಡನೇ ಬಾರಿ ಹೃದಯಾಘಾತದಿಂದ ಕೊನೆಯುಸಿರೆಳೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ