Breaking News

ದಾವಣಗೆರೆ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾದಿಕ್‌ ಪೈಲ್ವಾನ್‌ ನಾಮಪತ್ರ ಸಲ್ಲಿಕೆ

Spread the love

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಮುಖಂಡ ಸಾದಿಕ್‌ ಪೈಲ್ವಾನ್‌ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ.

2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ ವಿಶ್ವಾಸವಿದೆ’ ಎಂದು ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕಾಂಗ್ರೆಸ್‌ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಲವು ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದೇನೆ. ಟಿಕೆಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮುಖಂಡರ ಸಭೆ ನಡೆಯುತ್ತಿದೆ. ನಾಯಕರು ನನ್ನೊಂದಿಗೂ ಚರ್ಚೆ ನಡೆಸಿದ್ದಾರೆ. ಸಮರ್ಥ ಶಾಮನೂರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ