Breaking News

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Spread the love

ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಉಲೇಮಾಗಳು ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಉಳಿಸಿ, ಬೆಳೆಸಿಕೊಂಡು ಬಂದಿದ್ದೇವೆ. ಆದ್ರೆ ದಾವಣಗೆರೆ ಚುನಾವಣೆಯಲ್ಲಿ ನಮ್ಮ ನಾಯಕರನ್ನು ಮೂಲೆಗೆ ಸೇರಿಸುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಕಾಂಗ್ರೆಸ್ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಹಿಜಾಬ್ ಸಮಸ್ಯೆ, ಮೀಸಲಾತಿ ಬಗ್ಗೆ ಏನೂ ಮಾಡಿಲ್ಲ. ಮುಸ್ಲಿಂ ಸಮುದಾಯ ಅತ್ತಾಗ ಚಾಕಲೇಟ್ ಕೊಡುವಂತೆ ಸಮಾಧಾನ ಮಾಡುತ್ತಿದ್ದಾರೆ. ಅಬ್ದುಲ್ ಜಬ್ಬಾರ್ ವಿರುದ್ಧದ ಉಚ್ಚಾಟನೆ ವಾಪಸ್‌ ಪಡೆದಿಲ್ಲ ಅಂದರೆ ಪಕ್ಷ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ