Breaking News

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

Spread the love

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ.

ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ.

ಈ ವೇಳೆ ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಕುರ್ಚಿ, ಸೋಫಾ ಸೆಟ್ ಪೀಸ್​ ಪೀಸ್ ಆಗಿದೆ. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ