Breaking News

ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Spread the love

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ  ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಕ್ರೀಟ್ ಛಾವಣಿ ಕುಸಿದು ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಧ್ವಜಾರೋಹಣ ಸಮಾರಂಭದ ನಂತರ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಲವು ಮಕ್ಕಳು ಶಾಲೆಯ ಮುಖ್ಯ ದ್ವಾರದ ಮೇಲಿದ್ದ ಛಾವಣಿ ಹತ್ತಿದಾಗ, ತೂಕ ಹೆಚ್ಚಾಗಿ ರಚನೆ ಕುಸಿದು ಬಿದ್ದು ಅವಘಡ ಸಂಭವಿಸಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎಸ್‌ಡಿಎಂ, ವೃತ್ತ ಅಧಿಕಾರಿ (ಸಿಒ) ಮತ್ತು ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅಂಕಿತ್ ಖಂಡೇಲ್ವಾಲ್, ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೃಷ್ಣ ಕುಮಾರ್ ಬಿಷ್ಣೋಯ್ ಮತ್ತು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಅಲ್ಕಾ ಶರ್ಮಾ ಕೂಡ ಸ್ಥಳದಲ್ಲಿದ್ದರು.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭಾಲ್ ತಹಸಿಲ್‌ನ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮದಲಾ ಫತೇಪುರ್ ಗ್ರಾಮದಲ್ಲಿರುವ ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ನಯೀಮ್ ಎಂಬವರ ಪುತ್ರ ಆರು ವರ್ಷದ ನಿಜಾಮ್ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. 11 ವರ್ಷದ ಸೈಫ್ ಅಲಿ (7ನೇ ತರಗತಿ) ಮತ್ತು 10 ವರ್ಷದ ಶೈದಾನ (5 ನೇ ತರಗತಿ) ಗಾಯಗೊಂಡಿದ್ದಾರೆ.

ಸ್ಥಳದಲ್ಲಿದ್ದವರು ಅವಶೇಷಗಳನ್ನು ತೆಗೆದು ಮಕ್ಕಳನ್ನು ರಕ್ಷಿಸಿದ್ದಾರೆ. ಗಾಯಗೊಂಡ ಮಕ್ಕಳನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ನಿಜಾಮ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯ ನಂತರ ನಿಜಾಮ್ ಅವರ ಕುಟುಂಬ ತೀವ್ರ ಆಘಾತದಲ್ಲಿದೆ. ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ