Breaking News

ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್: ಡಾ.ಎಸ್. ಬಿ.ಬೊಮ್ಮನಹಳ್ಳಿ

Spread the love

ಬೆಳಗಾವಿ: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಲ್ಕು ಮಾದರಿಗಳ ಪೈಕಿ ಇನ್ನೊಂದು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿರುತ್ತವೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ಹದಿನೈದು ಮಾದರಿಗಳ ಪೈಕಿ ಇದೀಗ ಹದಿನಾಲ್ಕು ನೆಗೆಟಿವ್ ಬಂದಿರುತ್ತವೆ.

ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ