Breaking News

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

Spread the love

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದರ ಜೊತೆಗೆ ಜಿಲ್ಲೆಯಲ್ಲಿ 14,

ಸೆಕ್ಷನ್ ಜಾರಿ ಮಾಡಲಾಗಿದೆ.

ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಸೂಚನೆ ಮೆರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಜಿಲ್ಲಾಧಿಕಾರಿ

ನಿತೇಶ್ ಕೆ.ಪಾಟೀಲ್ ಅವರು ಸೋಮವಾರ ಮಹಾರಾಷ್ಟ್ರ ಸಚಿವರ ಗಡಿ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದಾರೆ.

ಜಿಲ್ಲಾಡಳಿತದ ಈ ನಿರ್ಧಾರದಿಂದಾಗಿ ಮಹಾರಾಷ್ಟ್ರ ಸಚಿವರು ಮಂಗಳವಾರದ ಭೇಟಿ‌ ನೀಡುವುದು ಅನುಮಾನ ಎನ್ನಲಾಗಿದೆ.

ದಿನಾಂಕ 06-12-2022ರಂದು ಮಹಾರಾಷ್ಟ್ರ ರಾಜ್ಯದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಜವಳಿ ಹಾಗೂ ಸಂಸದೀಯ ವ್ಯವಹಾರ ಸಚಿವ ಚಂದ್ರಕಾಂತ ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರು ಬೆಳಗಾವಿ ಜಿಲ್ಲೆಗೆ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ತಿಳಿದು ಬಂದಿದೆ.

ಸಚಿವರು ಮತ್ತು ಸಂಸದ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇರುತ್ತೆ. ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ವಹಿಸಿ, ಬೆಳಗಾವಿ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಗಡಿಯನ್ನು ಪ್ರವೇಶಿಸಿ, ಈ ಸಚಿವರು, ಸಂಸದರು ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆ ನೀಡುವ ಸಾಧ್ಯತೆಗಳು ಇವೆ. ಈ ಮೂಲಕ ಭಾಷಾ ವೈಷಮ್ಯ ಬೆಳೆದು, ಹೆಚ್ಚಿನ ಪ್ರಮಾಣದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಸಾರ್ವಜನಿಕರ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗುವ ಸಂಭವ ಇರುತ್ತದೆ. ಈ ನಿಟ್ಟಿನಲ್ಲಿ ದಿನಾಂಕ 06-12-2022ರಂದು ಮಹಾರಾಷ್ಟ್ರ ಸಚಿವರು, ಸಂಸದರು ಬೆಳಗಾವಿ ಗಡಿಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿ ಆದೇಶಿಸಿದ್ದಾರೆ.ಸಿಆರ್​​ಪಿಸಿ 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 6 ರಂದು ಇಬ್ಬರು ಸಚಿವರನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಸ್ಥಳೀಯರು ಆಹ್ವಾನಿಸಿದ್ದರು. ವಿವಾದಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಲೂ ತೀರ್ಮಾನಿಸಿದ್ದರು. ಈ ವಿಚಾರ ಕನ್ನಡ ಪರ ಸಂಘಟನೆಗಳನ್ನು ಕೆರಳಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಈಗಿನ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಆಗಮಿಸುವುದು ಬೇಡ, ಉಭಯ ರಾಜ್ಯಗಳ ನಡುವೆ ಸಾಮರಸ್ಯವಿದೆ. ಇದನ್ನು ಹಾಳು ಮಾಡುವ ಪ್ರಯತ್ನ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಗೆ ಈ ಇಬ್ಬರು ಸಚಿವರು ಬಂದರೆ ಪರಿಸ್ಥಿತಿ ಏನು ಬೇಕಾದರೂ ಆಗಬಹುದು. ಕೆಲವು ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಸರ್ಕಾರಕ್ಕೆ ಮಾಹಿತಿ ನೀಡಿದೆ.

ಮಹಾರಾಷ್ಟ್ರ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕೆಣಕುವ ಯತ್ನ ಮಾಡಿದರೆ ಪರಿಸ್ಥಿತಿ ಕೈ ಮೀರಬಹುದು. ಈ ಹಿಂದೆಯೂ ಅನೇಕ ಬಾರಿ ಅಹಿತಕರ ಘಟನೆಗಳು ನಡೆದಿವೆ. ಹೀಗಾಗಿ ಅವಕಾಶ ಕೊಡಲೇಬೇಡಿ ಎಂದು ಪೊಲೀಸರಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

ಹಿಂದೆ ಹಲವಾರು ಬಾರಿ ಈ ರೀತಿ ಪ್ರಯತ್ನ ಆದಾಗ ಕರ್ನಾಟಕ ಸರಕಾರ ಏನು ಕ್ರಮ ಕೈಗೊಂಡಿದೆಯೋ ಅದೇ ಕ್ರಮವನ್ನು ಈಗಲೂ ಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಬೆಳಗಾವಿಗೆ ಭೇಟಿ ನೀಡುವುದರಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿ.6ರಂದು ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇವೆ. ಅಂಬೇಡ್ಕರ್‍ವಾದಿ ಸಂಘಟನೆಯ ಆಹ್ವಾನದ ಮೇರೆಗೆ ಡಾ.ಅಂಬೇಡ್ಕರ್ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುತ್ತೇವೆ ಎಂದು ಸಚಿವ ಚಂದ್ರಕಾಂತ ಪಾಟೀಲ ತಿಳಿಸಿದ್ದರು.

ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವುತ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಾರಾಷ್ಟ್ರದ ಸಚಿವರನ್ನು ಕರ್ನಾಟಕದಲ್ಲಿ ತಡೆಯಲು ಸಾಧ್ಯವಿಲ್ಲ. ಏಕನಾಥ ಶಿಂಧೆ ಸರಕಾರದ ಸಚಿವರಿಗೆ ಬೆಳಗಾವಿಗೆ ಹೋಗಲು ಆಗದಿದ್ದರೆ ಹೇಳಲಿ ನಾವೇ ಬೆಳಗಾವಿ ಭೇಟಿ ನೀಡುತ್ತೇವೆ ಎಂದಿದ್ದಾರೆ.

ಸಿಡಿದೆದ್ದ ಸಂಘಟನೆಗಳು:

ಇನ್ನು ಮಹಾರಾಷ್ಟ್ರ ಸಚಿವರು ಗಡಿ ವಿವಾದ ಇಟ್ಟುಕೊಂಡು ಬೆಳಗಾವಿಗೆ ಬರುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ತೀರ ಆಕ್ರೋಶ ವ್ಯಕ್ತಪಡಿಸಿವೆ.

ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ವಾಟಾಳ್ ಪಕ್ಷ, ಕನ್ನಡ ಅಭಿವೃದ್ಧಿ ಪ್ರಾಕಾರ, ಗಡಿ ಹೋರಾಟ ಸಮಿತಿ ಹೀಗೆ ಹತ್ತಾರು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಮಹಾರಾಷ್ಟ್ರ ಸಚಿವರ ಭೇಟಿಗೆ ಅವಕಾಶ ಕೊಡಬಾರದು. ಒಂದು ವೇಳೆ ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಅವರು ಬೆಳಗಾವಿಗೆ ಬಂದರೆ ನಾವು ಕೂಡ ದೊಡ್ಡ ಹೋರಾಟ ಮಾಡಲೇಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ಬೆಳಗಾವಿಯಲ್ಲಿ ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದೆಂಬ ಆತಂಕ ಎದುರಾಗಿದೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಕನ್ನಡಪರ ಹೋರಾಟಗಾರರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ದೇಶದ ಪ್ರತಿಯೊಬ್ಬ ಪ್ರಜೆಯು ಎಲ್ಲಿಗೆ ಬೇಕಾದರೂ ಹೋಗಿ ಬರಲು ಕಾನೂನಿನಲ್ಲಿ ಅವಕಾಶವಿದೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ರಾಜ್ಯ ಸರ್ಕಾರಗಳು ಕ್ರಮ ತೆಗೆದುಕೊಳ್ಳಲು ಅವಕಾಶವಿದೆ.

ಮಹಾರಾಷ್ಟ್ರ ಸಚಿವರು ಉದ್ದಟತನದಿಂದ ವರ್ತಿಸಿ ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ.

ಬಸವರಾಜ್ ಬೊಮ್ಮಯಿ

ಮುಖ್ಯಮಂತ್ರಿ

ಮುಂಬೈ – ಮಹಾರಾಷ್ಟ್ರ -ಕರ್ನಾಟಕ ಗಡಿ ವಿವಾದ ಕುರಿತಂತೆ ವಿವಾದಿತ ಪ್ರದೇಶಗಳಿಗೆ ಸಚಿವರ ಭೇಟಿ ಕುರಿತಂತೆ ಮುಖ್ಯಮಂತ್ರಿ ಏಕನಾಥ ಶಿಂದೆ ಅಂತಿಮ ತೀರ್ಮಾನ ತೆಗೆದುಕೊಳ್ಳುವರು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.

ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಅವರು ಡಿ.6ರಂದು ಕರ್ನಾಟಕದ ಬೆಳಗಾವಿಗೆ ಭೇಟಿ ನೀಡಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪದಾಧಿಕಾರಿಗಳ ಜೊತೆಗೆ ಚರ್ಚಿಸುವ ಕಾರ್ಯಕ್ರಮವಿತ್ತು.

‘ಇಬ್ಬರೂ ಸಚಿವರಿಗೆ ಡಿ.6ರಂದು ಡಾ.ಅಂಬೇಡ್ಕರ್ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ಥಳೀಯರು ಆಹ್ವಾನಿಸಿದ್ದಾರೆ. ವಿವಾದಿತ ಸ್ಥಳಕ್ಕೆ ಭೇಟಿಯಿಂದ ಕಾನೂನು ಸಮಸ್ಯೆಯಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಸಿ.ಎಂ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವರು’ ಎಂದು ಫಡಣವೀಸ್ ತಿಳಿಸಿದ್ದಾರೆ.

Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಕೃಷ್ಣ ಬೈರೇಗೌಡ

Spread the loveಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ