ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ ಸಭೆ ಕೈಬಿಟ್ಟು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ನಾಳೆ ನಡೆಯಲಿರುವ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಮಹತ್ವದ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ. ಬೆಳಗ್ಗೆ 9.50ಕ್ಕೆ ಅವರು ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಡಿಸಿಎಂ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ, ಕಾನೂನು ಹೋರಾಟದ ಕುರಿತು ಸುಪ್ರೀಂಕೋರ್ಟ್ ವಕೀಲರೊಂದಿಗೆ ಹಾಗೂ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಸಂಘರ್ಷವೇ ಈ ದಿಢೀರ್ ಭೇಟಿಯ ಮೂಲ ಎನ್ನಲಾಗಿದೆ. ಸಿಎಂ ಬದಲಾವಣೆ ಅಥವಾ 2.5 ವರ್ಷದ ಅವಧಿಯ ಸ್ಪಷ್ಟ ಸೂತ್ರಕ್ಕಾಗಿ ಡಿಕೆಶಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ. ಬಜೆಟ್ ಸಭೆಗೆ ಗೈರಾಗುವ ಮೂಲಕ ಅವರು ಹೈಕಮಾಂಡ್‌ಗೆ ಪರೋಕ್ಷವಾಗಿ ಅಸಮಾಧಾನದ ಸಂದೇಶ ರವಾನಿಸಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.
Laxmi News 24×7