Breaking News

ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ, ಡಿಕೆಶಿ ದೌಡು

Spread the love

ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆಗಳಿಗೆ ಒಳಪಡಿಸಿದೆ.

ಸದ್ಯ ವೈದ್ಯರ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು ಶೀಘ್ರದಲ್ಲೇ ಅಧಿಕೃತ ಹೆಲ್ತ್ ಬುಲೆಟಿನ್ ಹೊರಡಿಸುವ ಸಾಧ್ಯತೆಯಿದೆ.

ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಸಂತನಗರದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಬಳಲಿದಂತೆ ಕಂಡುಬಂದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಆರೋಗ್ಯವಾಗಿದ್ದಾರೆ: ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಯುಟಿ ಖಾದರ್‌ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿ, ನಾನು ಪರಮೇಶ್ವರ್‌ ಜೊತೆ ಮಾತನಾಡಿ ಬಂದಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಎಲ್ಲವೂ ನಾರ್ಮಲ್‌ ಇದೆ ಎಂದಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ನಡೆಯುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ