Breaking News

ಅರಬ್‌ ರಾಷ್ಟ್ರಗಳಲ್ಲಿನ ಕನ್ನಡಿಗರನ್ನು ಕರೆತರಲು ಡಿಸಿಎಂ ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿದ ಕೇಂದ್

Spread the love

ಬೆಂಗಳೂರು : ಕೊವಿಡ್‌ನಿಂದಾಗಿ ಅರಬ್‌ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿ ದೇಶಕ್ಕೆ ವಾಪಸಾಗಲು ಬಯಸಿರುವ ಕನ್ನಡಿಗರಿಗೆ ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮೇ 10 ಅಥವಾ 11ಕ್ಕೆ ವಿಮಾನದ ವ್ಯವಸ್ಥೆ ಮಾಡಲಿದೆ.

ಭಾನುವಾರ ದುಬೈ ಕನ್ನಡಿಗರ ಜತೆ ವೀಡಿಯೋ ಸಂವಾದ ನಡೆಸಿದ್ದ ಡಾ. ಅಶ್ವತ್ಥನಾರಾಯಣ, ಅವರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಕಡೆಯಿಂದ ಆಗುವ ಎಲ್ಲ ಸಹಾಯ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಅದರಂತೆ ಬುಧವಾರ ಕೇಂದ್ರ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿದೆ. ಜತೆಗೆ, ನಗ್ಮಾ ಮಲಿಕ್‌ ಅವರನ್ನು ರಾಜ್ಯದ ಸಮನ್ವಯಕಾರರನ್ನಾಗಿ ನೇಮಿಸಿದೆ. ಇತರೆ ರಾಷ್ಟ್ರಗಳಲ್ಲಿ ಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಅವರು ಸಹಕರಿಸಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೈಶಂಕರ್‌ ಅವರಿಗೆ ಪತ್ರ ಬರೆದಿದ್ದ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, “ವಿಶ್ವದ ನಾನಾ ಭಾಗಗಳಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್‌ ಕರೆತರಲು ವಿದೇಶ ವ್ಯವಹಾರಗಳ ಸಚಿವಾಲಯ ವಿಮಾನದ ವ್ಯವಸ್ಥೆ ಕಲ್ಪಿಸಿರುವುದು ಸಂತಸದ ವಿಷಯ.

ಇದೇ ರೀತಿ ಅರಬ್‌ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ಯಾವುದೇ ಈವರೆಗೆ ಯಾವುದೇ ವಿಮಾನದ ವ್ಯವಸ್ಥೆ ಆಗಿಲ್ಲ. ಈ ಸಂಬಂಧ ಅಗತ್ಯ ನೆರವು ನೀಡಿ ಸಹಕರಿಸಿ,”ಎಂದು ಮನವಿ ಮಾಡಿದ್ದರು

ಅಲ್ಲದೆ, “ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್‌ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ.

ಅವರನ್ನು ಕರ್ನಾಟಕಕ್ಕೆ ವಾಪಸ್‌ ಕರೆತರಲು ವಿದೇಶ ವ್ಯವಹಾರಗಳ ಸಚಿವಾಲಯ ಸೂಕ್ತ ವಿಮಾನ ವ್ಯವಸ್ಥೆ ಮಾಡಬೇಕು,”ಎಂದು ಪತ್ರದಲ್ಲಿ ಕೋರಿದ್ದರು.

ಈ ಮಧ್ಯೆ, ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ ಅವರು, ಅರಬ್ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಭಾರತಕ್ಕೆ ಮರಳಲು ವಿಮಾನ ವ್ಯವಸ್ಥೆ ಕಲ್ಪಿಸುವ ಬಗ್ಗೆ ತಾವು ಕೂಡ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಿಗೆ ಪತ್ರ ಬರೆದಿರುವುದಲ್ಲದೆ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಯುಎಇ- ಮಂಗಳೂರು ವಿಮಾನದ ವ್ಯವಸ್ಥೆಗೆ ಆದ್ಯತೆ ನೀಡಲು ಕೋರಿರುವುದಾಗಿ ತಿಳಿಸಿದ್ದಾರೆ


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ