ಬೆಂಗಳೂರು, ಜ.18-ಶೃಂಗೇರಿಯ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಸ್ಥಳೀಯ ನ್ಯಾಯಾಲಯ ಆದೇಶ ನೀಡಿದೆ.
2016, ಫೆ.16 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಂದು ಹಾಳು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ಉಮೇಶ್ ಅಡಿಗ ಅವರು ಆರೋಪಿಗಳಾದ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೂ ಗಲ್ಲು ಶಿಕ್ಷೆ ಪ್ರಕಟಿಸಿದರು.
ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮೆಣಸೆಯಿಂದ ಕಾಲು ದಾರಿಯಲ್ಲಿ ಮನೆಗೆ ಹೋಗುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅದೇ ಊರಿನ ಯುವಕರು ಅತ್ಯಾಚಾರ ಎಸಗಿ, ಕೊಲೆ ಮಾಡಿ ಬಾವಿಗೆ ಎಸೆದು ಹೋಗಿದ್ದರು
.