Breaking News

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ

Spread the love

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ.

ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು ಗ್ರಾಮೀಣಾಭಿವೃದ್ಧಿ ಸಲಹೆಗಾರರಾದ ರಾಜಶೇಖರನ್ 1928ರ ಸೆಪ್ಟೆಂಬರ್ 12 ರಂದು ರಾಮನಾಗರ ಜಿಲ್ಲೆಯ ಮರಲವಾಡಿಯಲ್ಲಿ ಜನಿಸಿದ್ದರು. ಎಂಎಲ್‍ಸಿ, ಸಂಸದ ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ರಾಜಶೇಖರನ್ ಅವರು ಸರಳತೆ, ನಮ್ರತೆ ಮತ್ತು ದೊಡ್ಡ ಪ್ರಬುದ್ಧತೆ ಹೊಂದಿರುವ ರಾಜಕಾರಣಿಯಾಗಿದ್ದರು.


Spread the love

About Laxminews 24x7

Check Also

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Spread the loveನವದೆಹಲಿ: ಕರ್ನಾಟಕದಲ್ಲಿ  ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ