ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್‍ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ ಮಹಿಳೆಯರು ಸಿಹಿ ಹಂಚಿ ಸಂಭ್ರಮಿಸಿದರು.
ಕೊನೆಗೂ ನಿರ್ಭಯಾ ಆತ್ಮಕ್ಕೆ ಶಾಂತಿ ದೊರೆತಿದೆ ಮತ್ತು ಅಕೆಯ ಪೋಷಕರು ನಡೆಸಿದ ಸುದೀರ್ಘ ಕಾನೂನು ಸಮರಕ್ಕೆ ನ್ಯಾಯ ಲಭಿಸಿದೆ ಎಂಬು ಮಹಿಳೆಯರು ಸಂತೃಪ್ತ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.ನಿರ್ಭಯಾ ಚಿರಾಯುವಾಗಲಿ, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಮೊಳಗಿದವು.
