Breaking News

ಭದ್ರಾ ಡ್ಯಾಂನಿಂದ ಹಾವೇರಿಗೆ ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ

Spread the love

ಶಿವಮೊಗ್ಗ: ಹಾವೇರಿ , ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ.

ತುಂಗಭದ್ರಾ ನದಿಯ ನೀರನ್ನು ಅವಲಂಬಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶಿವಮೊಗ್ಗದ ಭದ್ರಾವತಿ ಬಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 18ರಿಂದ 23ರವರೆಗೆ ಪ್ರತಿದಿನ 2 ಸಾವಿರ ಕ್ಯೂಸೆಕ್‌ನಂತೆ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ.

ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ