Breaking News

ಮನೆಯೊಳಗೆ ಮಹಿಳೆ, ಸಾಕು ನಾಯಿಯ ಕೊಳೆತ ಶವ ಪತ್ತೆ

Spread the love

ಶಿವಮೊಗ್ಗ: ಇಲ್ಲಿನ  ರವೀಂದ್ರ ನಗರದ ಮನೆಯೊಂದರಲ್ಲಿ ಮಹಿಳೆ  ಮತ್ತು ಅವರ ಸಾಕು ನಾಯಿಯ  ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಪ್ರಭಾವತಿ (57) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ. ಇಂದು ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ