ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿಯಾಗಿದ್ದಾರೆ.

ಇವರು ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವ್ಯಕ್ತಿ ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಈ ವರೆಗೆ ಕೊರೊನಾಗೆ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಮೃತ ಸೋಂಕಿತನ ಜತೆ ಸಂಪರ್ಕ ಹೊಂದಿದ್ದ ಪತ್ನಿ, ಮಗ, ಅಳಿಯ ಹಾಗೂ ಆಟೋ ಚಾಲಕನ ತಾಪಾಸಣೆ ನಡೆಸಲಾಗುತ್ತಿದೆ


Spread the love

About Laxminews 24x7

Check Also

ಬೆಲೆ ಏರಿಕೆ ನಡುವೆ BSNL ಗ್ರಾಹಕರಿಗೆ ಗುಡ್ ನ್ಯೂಸ್

Spread the love ನವದೆಹಲಿ: ಭಾರತದಲ್ಲಿನ ಟೆಲಿಕಾಂ ಸೇವಾ ಪೂರೈಕೆದಾರರು ಇತ್ತೀಚೆಗೆ ತಮ್ಮ ರೀಚಾರ್ಜ್ ಬೆಲೆಗಳನ್ನು ನವೀಕರಿಸಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ