Breaking News

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Spread the love

ಧಾರವಾಡ: ಸ್ವಾಧೀನಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ರೈತನಿಗೆ ಬಾಕಿ ಹಣವನ್ನು ಕೊಡದ ಹಿನ್ನೆಲೆ ನ್ಯಾಯಾಲಯದ  ಆದೇಶದಂತೆ ಧಾರವಾಡ  ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಸಾಮಾನುಗಳನ್ನು ಜಪ್ತಿ ಮಾಡಲಾಯಿತು.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ರೈತ ನಾಗನಗೌಡ ಪಾಟೀಲ ಎಂಬುವವರಿಗೆ ಸೇರಿದ ಎರಡು ಎಕರೆ ಜಮೀನನ್ನು ರುದ್ರಭೂಮಿಗಾಗಿ 2010ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆಗ ಪ್ರತಿ ಗುಂಟೆ ಜಮೀನಿಗೆ 10,500 ರೂ. ಲೆಕ್ಕ ಹಾಕಿ 2 ಎಕರೆ ಜಮೀನಿಗೆ 35 ಲಕ್ಷ ಪರಿಹಾರ ನೀಡುವ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಆ ಪ್ರಕಾರ ರೈತನಿಗೆ 20 ಲಕ್ಷ ಹಣ ನೀಡಿ 15 ಲಕ್ಷ ಹಣವನ್ನು ಬಾಕಿ ಇರಿಸಿಕೊಳ್ಳಲಾಗಿತ್ತು.

ಹಲವು ಬಾರಿ ರೈತ ಬಾಕಿ ಹಣ ನೀಡುವಂತೆ ಮನವಿ ಮಾಡಿದ್ದರೂ ಉಪವಿಭಾಗಾಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಾಗಿ ರೈತ ನಾಗನಗೌಡ ಕೋರ್ಟ್ ಮೊರೆ ಹೋಗಿದ್ದರು. ಇಂದು (ಏ.27) ಧಾರವಾಡದ 2ನೇ ಅಧಿಕ ದಿವಾಣಿ ನ್ಯಾಯಾಲಯ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶ ಮಾಡಿತ್ತು. ಆ ಹಿನ್ನೆಲೆ ಕೋರ್ಟ್ ಸಿಬ್ಬಂದಿ ಪೀಠೋಪಕರಣಗಳನ್ನು ಜಪ್ತಿ ಮಾಡಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ