Breaking News

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಗೂ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ

Spread the love

ರಾಜ್ಯ ಹಾಗೂ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ, ಬಂಧಿಸುತ್ತಿರುವ ಪೋಲಿಸರ ನಡೆ ಖಂಡಿಸಿ ಹಾಗೂ ಹೊಸದಾಗಿ ನೇಮಕವಾದ ದೇಶದ ರಕ್ಷಣಾ ಪಡೆಯ ಸೈನಿಕರು (ಅಗ್ನಿವೀರ)ಅವರ ನೇಮಕಾತಿ ಪ್ರಕ್ರಿಯೆಯ ಕೊನೆಯ ಹಂತದ ಪೋಲಿಸ್ ಠಾಣೆಯ ವಿಚಾರಣೆ ಪ್ರಕ್ರಿಯೆ ( ಪೋಲಿಸ್ ವೇರಿಪಿಕೇಷನ್) ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಕೇಸ್ ಕುರಿತು ಹಾಗೂ ಅಗ್ನಿವೀರರ ನೇಮಕ ಪ್ರಕ್ರಿಯೆಯ ಪೋಲಿಸ್ ವಿಚಾರಣಾ ಪ್ರಕ್ರಿಯೆ (ಪೋಲಿಸ್ ವೇರಿಪಿಕೇಷನ್) ವಿಳಂಬವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಆನಂದ ಅತ್ತುಗೋಳ, ಮಂಜುನಾಥ ಅಷ್ಟಗಿ ಉಪಸ್ಥಿತರಿದ್ದರು


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ