Breaking News
Home / Uncategorized / ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Spread the love

ನವದೆಹಲಿ(ಜು.04): ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.53.5ರಷ್ಟುವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುತ್ತಿದ್ದರೆ, ಶೇ.42.2ರಷ್ಟುಮಕ್ಕಳು ಇಂಗ್ಲಿಷ್‌ನಲ್ಲಿ ಕಲಿಯುತ್ತಿದ್ದಾರೆ ಎಂದು ಯುಡಿಐಎಸ್‌ಇ (ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ) ವರದಿ ಬಿಡುಗಡೆ ಮಾಡಿದೆ.

ಇನ್ನು ದಕ್ಷಿಣದ ಇತರ ರಾಜ್ಯಗಳ ಪೈಕಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯ ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲೂ ಮಾತೃಭಾಷೆಗಿಂತ ಇಂಗ್ಲಿಷ್‌ ಭಾಷೆಯಲ್ಲಿ ಶಿಕ್ಷಣ ಪಡೆಯುವ ಮಕ್ಕಳ ಸಂಖ್ಯೆ ಹೆಚ್ಚಿದೆ ಎಂದು ತಿಳಿಸಿದೆ.

ಈ ನಡುವೆ ದೇಶದಲ್ಲಿ ಶೇ.26ರಷ್ಟುಮಕ್ಕಳು ಇಂಗ್ಲಿಷ್‌ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ಶೇ.42ರಷ್ಟುವಿದ್ಯಾರ್ಥಿಗಳು ಹಿಂದಿಯಲ್ಲಿ ಕಲಿಕೆ ಮಾಡುತ್ತಿದ್ದಾರೆ. ಪಂಜಾಬ್‌, ಹರಾರ‍ಯಣ, ದೆಹಲಿ, ಹಲವು ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತೃಭಾಷೆಗಿಂತ ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ಪಡೆಯತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿದೆ ಎಂದು ತಿಳಿಸಿದೆ.

ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿವರೆಗೆ ಶಿಕ್ಷಣ ಪಡೆಯುತ್ತಿರುವ 26.5 ಕೋಟಿ ಮಕ್ಕಳನ್ನು ಪರಿಗಣಿಸಿ ಈ ವರದಿ ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ