Home / new delhi / ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

Spread the love

ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ

ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. ರಾಜ್ಯಗಳಿಗೆ ಮರಳಿದ ಅನೇಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಅವರೊಂದಿಗೆ ಸಂಪರ್ಕ ಹೊಂದಿದ್ದ ಜನರನ್ನೂ ಕೂಡ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಆರೋಗ್ಯ ಇಲಾಖೆ ಕಾಯುತ್ತಿದೆ.

ಸದ್ಯಕ್ಕೆ ದೇಶದಲ್ಲಿ 400ಕ್ಕೂ ಹೆಚ್ಚು ಮಂದಿಗೆ ಕೊರೊನಾ ಬಂದಿದ್ದು, ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಇದರ ಜೊತೆ ಇವರ ಸಂಪರ್ಕಕ್ಕೆ ಬಂದವರಿಗೂ ಕೊರೊನಾ ಹರಡುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ.

ವಿವಿಧ ರಾಜ್ಯದಲ್ಲಿ 9 ಸಾವು:
ಜಮಾತ್ ಸಭೆಯಿಂದ ವಾಪಸ್ ಆಗಿದ್ದ ತೆಲಂಗಾಣದಲ್ಲಿ ಒಂಬತ್ತು ಜನರು, ದೆಹಲಿ, ಮಹಾರಾಷ್ಟ್ರ, ಜಮ್ಮು-ಕಾಶ್ಮೀರದ ತಲಾ ಇಬ್ಬರು, ಕರ್ನಾಟಕದ, ಆಂಧ್ರ ಪ್ರದೇಶ, ಬಿಹಾರ್ ಹಾಗೂ ಗುಜರಾತ್‍ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿತ ಸಂಖ್ಯೆಯಂತೂ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಲೇ ಇದೆ.

ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು 1,965 ಜನರಿಗೆ ಸೋಂಕುಲಿದ್ದು, ಅವರಲ್ಲಿ 151 ಜನರು ಗುಣಮುಖರಾಗಿದ್ದಾರೆ. ಉಳಿದಂತೆ 50 ಜನರ ಕೊರೊನಾಗೆ ಬಲಿಯಾಗಿದ್ದಾರೆ.

ಯಾವ ರಾಜ್ಯದಲ್ಲಿ ಎಷ್ಟು ಸೋಂಕಿತರು?
ಆಂಧ್ರಪ್ರದೇಶದ 746ಕ್ಕೂ ಹೆಚ್ಚು ಜನರು ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ 70 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 659 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

ದೆಹಲಿಯ ಸಭೆಗೆ ತೆಲಂಗಾಣದ 1,030 ಜನರು ಹಾಜರಾಗಿದ್ದರು. ಅವರಲ್ಲಿ 321 ಜನರಿಗೆ ಸೋಂಕು ತಗುಲಿದ್ದು, 700 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ತಬ್ಲಿಘಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದ 46 ಜನರು ಗೋವಾಗೆ ಬಂದಿದ್ದಾರೆ. ಅವರನ್ನು ಗುರುತಿಸಿದ ಕ್ವಾರಂಟೈನ್‍ನಲ್ಲಿ ಇರಿಸಿದ್ದೇವೆ. ಆದರೆ ಅವರು ಗೋವಾಕ್ಕೆ ಯಾಕೆ ಬಂದಿದ್ದಾರೆಂದು ನಮಗೆ ತಿಳಿದಿಲ್ಲ. ಉಳಿದವರ ಹುಡುಕಾಟ ನಡೆಸಿದ್ದೇವೆ ಎಂದರು.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮರ್ಕಜ್ ನಿಜಾಮುದ್ದೀನ್‍ನಿಂದ ವಾಪಸ್ ಆಗಿರುವ 2,346 ಜನರಲ್ಲಿ 1,810 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಉಳಿದ 536 ಜನರನ್ನು ನಗರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎಲ್ಲಾ 2,346 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ವೇಳೆ ಅವರನ್ನು ಹಾಗೆ ಬಿಟ್ಟರೆ ನಗರದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ