Breaking News

ಭಾರತದಲ್ಲಿ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆ – 24 ಗಂಟೆಯಲ್ಲಿ 5,242 ಹೊಸ ಪ್ರಕರಣ ಪತ್ತೆ

Spread the love

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. 3,029 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆಯಲ್ಲಿ 5,242 ಹೊಸ ಪ್ರಕರಣಗಳು ಹಾಗೂ 157 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 36,824 ಮಂದಿ ಗುಣಮುಖರಾಗಿದ್ದಾರೆ. 56,316 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಹರಡಿದ್ದು, ಈವರೆಗೆ 33,053 ಮಂದಿ ಸೋಂಕಿಗೆ ತುತ್ತಾಗಿದ್ದು, ಭಾನುವಾರ ಒಂದೇ ದಿನ 2,347 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದೆ. 1,198 ಮಂದಿ ಕೊರೊನಾಗೆ ಬಲಿಯಾಗಿದ್ದು, 7,688 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಗುಜರಾತ್‍ನಲ್ಲಿ 11,380 ಮಂದಿ ಸೋಂಕಿಗೆ ತುತ್ತಾಗಿದ್ದು, 659 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 11,224 ಮಂದಿಗೆ ಕೊರೊನಾ ತಗುಲಿದ್ದು, 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 9,755 ಮಂದಿ ಕೊರೊನಾಗೆ ತುತ್ತಾಗಿದ್ದು, 148 ಮಂದಿ ಮೃತಪಟ್ಟಿದ್ದಾರೆ. ಸುಮಾರು 4,202 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ಆಂಧ್ರಪ್ರದೇಶದಲ್ಲಿ 2,380 ಮಂದಿಗೆ ಸೋಂಕು ತಗುಲಿದ್ದು, 50 ಮಂದಿ ಸಾವನ್ನಪ್ಪಿದ್ದಾರೆ. 1,456 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,551 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 602 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 497 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,147 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 37ಕ್ಕೆ ಏರಿದೆ. ಒಟ್ಟು 501 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ