ನವದೆಹಲಿ: ನಾಲ್ಕನೇ ಹಂತದ ಲಾಕ್‍ಡೌನ್ ಮುಕ್ತಾಯಕ್ಕೆ ಇನ್ನು 4 ದಿನಗಳು ಮಾತ್ರ ಬಾಕಿ ಉಳಿದುಕೊಂಡಿದೆ. ಈ ನಡುವೆ ಮೇ 31 ಬಳಿಕ ಮುಂದೇನು ಅನ್ನೊ ಲೆಕ್ಕಾಚಾರದಲ್ಲಿರುವ ಕೇಂದ್ರ ಸರ್ಕಾರ ಮತ್ತೆರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡುವ ಲೆಕ್ಕಾಚಾರದಲ್ಲಿದೆಯಂತೆ. ಜೂನ್ 1ರಿಂದ 14ರ ವರೆಗೂ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಆಗಲಿದ್ದು ಮೇ 31ರ ‘ಮನ್ ಕೀ ಬಾತ್’ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಗೃಹ ಇಲಾಖೆ ಮೂಲಗಳು ಹೇಳುತ್ತಿವೆ.
ಲಾಕ್‍ಡೌನ್ ವಿಸ್ತರಣೆ ಬಗ್ಗೆ ತಿರ್ಮಾನಿಸಿರುವ ಗೃಹ ಇಲಾಖೆ, ಈ ಬಾರಿ ನೀಡಬೇಕಿರುವ ವಿನಾಯ್ತಿಗಳ ಬಗ್ಗೆ ಚರ್ಚೆ ಮಾಡುತ್ತಿದೆ. ಈ ಬಾರಿ ಯಾವುದಕ್ಕೆ ವಿನಾಯ್ತಿ ನೀಡಬೇಕು? ಯಾವುದಕ್ಕೆ ನಿರ್ಬಂಧ ಮುಂದುವರಿಸಬೇಕು ಎನ್ನುವ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಚರ್ಚೆ ನಡೆಸಲು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.
Laxmi News 24×7
