ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ಇನ್ನು, ಮಹಾಮಾರಿ ಕೋವಿಡ್-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್ನಿಂದ ದೆಹಲಿಯಲ್ಲಿ ಮೃತರಾದವರ ಸಂಖ್ಯೆ 1,400ಕ್ಕೆ ಏರಿಕೆಯಾಗಿದೆ.
ಎರಡು ದಿನದ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿ ಚರ್ಚೆ ನಡೆಸಿದರು.
ಇದನ್ನೂ ಓದಿ: ಕೋಲಾರ ಜಿ.ಪಂ ಸ್ಥಾಯಿ ಸಮಿತಿ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊಂದಾಣಿಕೆ
ದೆಹಲಿ ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಈ ಸಭೆ ನಡೆಯಿತು. ಸಭೆಯಲ್ಲಿ ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿತ್ತು.